ಕದ್ರಿ ಪಾರ್ಕಲ್ಲಿ ಸಂಗೀತ ಕಾರಂಜಿ

ಪ್ರಾಯೋಗಿಕ ಯಶಸ್ವಿ, ಶೀಘ್ರವೇ ಲೋಕಾರ್ಪಣೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದ ಹೆಸರಾಂತ ಕದ್ರಿ ಉದ್ಯಾನವನ ಇನ್ನಷ್ಟು ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ. ಕದ್ರಿಯ ಜಿಂಕೆ ಪಾರ್ಕಿನಲ್ಲಿ ಇದೀಗ ರೂಪುಗೊಂಡಿರುವ ಸಂಗೀತ ಕಾರಂಜಿ ಆಬಾಲವೃದ್ಧರಾಗಿಯಾಗಿ ಎಲ್ಲರನ್ನು ಆಕರ್ಷಿಸಲಿದೆ.

ಕದ್ರಿಯ ಜಿಂಕೆ ಪಾರ್ಕಿನ ಹಳೆ ಮೃಗಾಲಯದಲ್ಲಿ ಈ ಸಂಗೀತ ಕಾರಂಜಿ ರೂಪುಗೊಂಡಿದ್ದು, ಈಗಾಗಲೇ ಪ್ರಾಯೋಗಿಕವಾದ ಯಶಸ್ವಿ ನಾಟ್ಯವನ್ನು ಮಾಡಿದೆ. ಏಪ್ರಿಲ್ ಅಂತ್ಯದೊಳಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿದೆ.

ಲೇಸರ್ ಪ್ರದರ್ಶನದ ಮೂಲಕ ಜಿಲ್ಲೆಯ ಇತಿಹಾಸವನ್ನು ಪ್ರದರ್ಶಿಸಲು ಯೋಜನೆ ರೂಪಿಸಲಾಗಿದೆ. ಸುಮಾರು 30 ನಿಮಿಷಗಳ ಪ್ರಾಯೋಗಿಕ ಪ್ರದರ್ಶನವನ್ನು ವೀಕ್ಷಿಸಿದ ಜಿಲ್ಲಾಧಿಕಾರಿ, ಶಾಸಕ ಲೋಬೋ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಸಂಗೀತ ಕಾರಂಜಿ ನಿರ್ಮಾಣದ ರೂಪುರೇಷೆ ಸಿದ್ಧಗೊಂಡಿತ್ತು. ಈಗ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 5 ಕೋಟಿ ರೂ ವೆಚ್ಚದಲ್ಲಿ ಹಳೆ ಜಿಂಕೆ ಪಾರ್ಕನ್ನು ಅಭಿವೃದ್ಧಿಪಡಿಸಿ ಅಲ್ಲಿ ಸಂಗೀತ ಕಾರಂಜಿ, ಲೇಸರ್ ಪ್ರದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ.

ಯಕ್ಷಗಾನ, ಭೂತಾರಾಧನೆ ಹಾಗೂ ಜಿಲ್ಲೆಯ ಇತರ ಸಂಸ್ಕೃತಿಗೆ ಪೂರಕವಾದ ಅಂಶಗಳನ್ನು ಈ ಸಂಗೀತ ಕಾರಂಜಿ ಪಾರ್ಕ್ ಪ್ರತಿಬಿಂಬಿಸಲಿದೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಂಗೀತ ಪಾರ್ಕ್ ಇರುವಂತೆಯೇ, ಮಂಗಳೂರಿನ ಈ ಪಾರ್ಕಿಗೆ ರಾಜೀವ ಗಾಂಧಿ ಸಂಗೀತ ಪಾರ್ಕ್ ಹೆಸರನ್ನು ಅಂತಿಮಗೊಳಿಸಲಾಗಿದೆ.