ಕಾಮಾಜೆ ರಸ್ತೆ ಕೆಸರುಮಯ

ಬಂಟ್ವಾಳ ಪುರಸಭಾ ವ್ಯಾಪ್ತಿಯ 2ನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿಯಿಂದ ಬಿ ಸಿ ರೋಡ್ ಕಾಮಾಜೆ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ. ದಿನದ 24 ಗಂಟೆ ಕುಡಿಯುವ ನೀರು ಪೂರೈಸುವ 56 ಕೋಟಿ ರೂಪಾಯಿ ವೆಚ್ಚದ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಕಾಮಗಾರಿ ಈಗಾಗಲೇ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಕ್ತಾಯಗೊಂಡಿದೆ. ಬಹುತೇಕ ಕಡೆಗಳಲ್ಲಿ ಪೈಪ್ ಲೈನ್ ರಸ್ತೆ ಬದಿಯಲ್ಲೇ ಹಾದು ಹೋಗಿರುವುದರಿಂದ ಪೈಪ್ ಅಳವಡಿಕೆ ಸಂದರ್ಭ ರಸ್ತೆ ಅಗೆದು ಹಾಕಿರುವುದರಿಂದ ಪುರಸಭಾ ವ್ಯಾಪ್ತಿಯ ಬಹುತೇಕ ರಸ್ತೆಗಳು ಹದಗೆಟ್ಟಿದೆ ಈ ಬಗ್ಗೆ ಪುರಸಭೆಗೆ ಮನವಿ ಮೇಲೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ  ಇನ್ನಾಧರೂ ರಸ್ತೆ ಕೂಡಲೇ ದುರಸ್ತಿಗೊಳಿಸಿ

  • ಚಂದ್ರಹಾಸ ಕೆ ಕೋಟ್ಯಾನ್  ಕಾಮಾಜೆ