ಕೇಂದ್ರೀಯ ಶಾಲೆಗಳಲ್ಲಿಯೂ ಕನ್ನಡ ಕಡ್ಡಾಯ : ಸಚಿವ ಸೇಠ್

ಬೆಂಗಳೂರು : ಸಿಬಿಎಸ್‍ಇ ಮತ್ತು ಐಸಿಎಸ್‍ಇ ಶಾಲೆಗಳಲ್ಲಿ ಕನ್ನಡ ಶಿಕ್ಷಣ ಕಡ್ಡಾಯಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು. “ಈ ನಿಯಮ ಈಗಾಗಲೇ ಅಸ್ತಿತ್ವದಲ್ಲಿದೆ. ಆದರೆ ಕೆಲವು ಶಾಲೆಗಳು ಇದನ್ನು ಅನುಸರಿಸುವುದಿಲ್ಲ. ಮುಂದೆ ಈ ನಿಯಮ ಪಾಲಿಸದ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದವರು ಎಚ್ಚರಿಸಿದರು.