ಮಳೆಗಾಲದ ವಿಕೋಪ ತಡೆಗೆ ಕಾರ್ಕಳ ತಾಲೂಕಾಡಳಿತ ಸಿದ್ಧ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ತಾಲೂಕಿನಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯಿಂದ ಎದುರಾಗುವ ಪ್ರಕೃತಿ ವಿಕೋಪ ತಡೆಗೆ ತಾಲೂಕು ಸನ್ನದ್ಧವಾಗಿದೆ.

ಕಾರ್ಕಳ ಪುರಸಭೆ ಹಾಗೂ ತಾಲೂಕು ಆಡಳಿತದಿಂದ ಈಗಾಗಲೇ ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇದಕ್ಕೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಆಗಾಗ ಸಾರ್ವಜನಿಕರಿಂದ ಬರುವ ದೂರುಗಳನ್ನು ಗಮನಿಸಿ ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಮಳೆಗಾಲದಲ್ಲಿ ರಸ್ತೆಗೆ ಮರ ಬಿದ್ದರೆ, ಕಂಬಗಳು ತುಂಡಾದರೆ, ಹೊಂಡಗಳು ತುಂಬಿ ರಸ್ತೆ ಬ್ಲಾಕ್ ಆದರೆ, ಮನೆಗಳು ಕುಸಿದು ಬಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿದೆ. ಚರಂಡಿ ಸಮಸ್ಯೆಯಿಂದಲೇ ನಲುಗುತ್ತಿರುವ ಇಲ್ಲಿನ ಮುಖ್ಯ ರಸ್ತೆಯಲ್ಲಿ ನೀರು ಸರಾಗವಾಗಿ ಹರಿಯಲು ಚರಂಡಿಯನ್ನು ಬಿಡಿಸಿ ಯಾವುದೇ ಸಮಸ್ಯೆಯಾಗದಂತೆ ಪುರಸಭೆ ನಿಗಾ ವಹಿಸಲಿದೆ. ಈಗಾಗಲೇ ಮಳೆ ಆರಂಭಗೊಂಡಿದ್ದು, ಅಲ್ಲಲ್ಲಿ ಚರಂಡಿ ನೀರನ್ನು ಸರಾಗವಾಗಿ ಹರಿಯಬಿಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ತಾಲೂಕು ಆಡಳಿತವು ಕೂಡಾ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವ್ಯಾಪ್ತಿಯಲ್ಲಿ ಚರಂಡಿ ಸಮಸ್ಯೆಗಳು ಸಂಭವಿಸಿದಲ್ಲಿ ತಕ್ಷ