ಶಬರಿಮಲೆ ವಿಮಾನ ನಿಲ್ದಾಣಕ್ಕೆ ಕೇರಳ ಸಂಪುಟ ತಾತ್ವಿಕ ಒಪ್ಪಿಗೆ

ಸಾಂದರ್ಭಿಕ ಚಿತ್ರ

ಕಾಸರಗೋಡು : ಪಟ್ಟಣಂತಿಟ್ಟ ಜಿಲ್ಲೆಯ ಶಬರಿಮಲೆಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವೊಂದನ್ನು ನಿರ್ಮಿಸಲು ರಾಜ್ಯ ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಭೇಟಿ ನೀಡುವ ಸಾವಿರಾರು ಭಕ್ತಾದಿಗಳು ಕಳೆದ ಹತ್ತು ವರ್ಷಗಳಿಂದ ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದರು.

ವಿಮಾನ ನಿಲ್ದಾಣ ನಿರ್ಮಾಣವಾಗುವ ನಿಖರ ಸ್ಥಳದ ಬಗ್ಗೆ ಇನ್ನೂ ಮಾಹಿತಿಯಿಲ್ಲವಾದರೂ ಕಳೆದ ವರ್ಷ ಕೇಂದ್ರ ನಾಗರಿಕ ವಿಮಾಬಯಾನ ಸಚಿವ ಅಶೋಕ್ ಗಜಪತಿ ರಾಜು ಅವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಮಾನ ನಿಲ್ದಾಣಕ್ಕೆ ಶಬರಿಮಲೆ ಯಾತ್ರಿಕರ ಪ್ರಮುಖ ನಿಲುಗಡೆ ತಾಣವಾದ ಎರುಮಲೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದ್ದರು.