ಕೊಡಗು ಮುಸ್ಲಿಂ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸೇರಿದ ಮುಸ್ಲಿಮರು

ದುಷ್ಕರ್ಮಿಗಳಿಂದ ಧರ್ಮಗ್ರಂಥಕ್ಕೆ ಬೆಂಕಿ

ಮಡಿಕೇರಿ : ಮುಸ್ಲಿಮರ ಧರ್ಮ ಗ್ರಂಥ ಕುರಾನಿಗೆ ಐಗೂರು ಮಸೀದಿಯಲ್ಲಿ ಬೆಂಕಿ ಹಚ್ಚಿದ ಪ್ರಕರಣವನ್ನು ಖಂಡಿಸಿ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೊಡಗು ಮುಸ್ಲಿಂ ಸಮಾಜ ನಗರದ ಗಾಂಧಿ ಮಂಟಪದ ಎದುರು ಸಾಂಕೇತಿಕವಾಗಿ ಪ್ರತಿಭಟನಾ ಸಭೆ ನಡೆಸಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕೊಡಗು ಮುಸ್ಲಿಂ ಸಮಾಜದ ಅಧ್ಯಕ್ಷ, ಮಾಜಿ ಶಾಸಕ ಕೆ ಎಂ ಇಬ್ರಾಹಿಂ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಗಾಂಧಿ ಮಂಟಪದ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ಐಗೂರು ಪ್ರಕರಣ ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಮಾನ ನಾಗರಿಕ ಸಂಹಿತೆಯನ್ನು ವಿರೋಧಿಸಿದರು.

ಕುರಾನಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳನ್ನು ಮುಂದಿನ ಒಂದು ವಾರದೊಳಗೆ ಜಿಲ್ಲಾ ಪೆÀÇಲೀಸರು ಬಂಧಿಸದಿದ್ದಲ್ಲಿ ಗಾಂಧಿ ಮೈದಾನದಲ್ಲಿ ಇಪ್ಪತ್ತೈದು ಸಾವಿರ ಮುಸ್ಲಿಮರನ್ನು ಸಂಘಟಿಸಿ ಪ್ರತಿಭಟನೆ ಹಾಗೂ `ವಿಧಾನಸೌಧ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ನೀಡಿದರು.

ಕೊಡಗು ಮುಸ್ಲಿಂ ಸಮಾಜದ ಕಾರ್ಯಾಧ್ಯಕ್ಷ ಪಿ ಎಂ ಖಾಸಿಂ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, “ನಮ್ಮ ಹೋರಾಟ ಯಾವುದೇ ಧರ್ಮದ ವಿರುದ್ಧವಾಗಿ ಅಲ್ಲ, ಬದಲಾಗಿ ದುಷ್ಕøತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕೆನ್ನುವುದಷ್ಟೇ” ಎಂದು ಸ್ಪಷ್ಟಪಡಿಸಿದರು.