ಕುಂದಾಪುರ -ಗೋವಾ ಚತುಷ್ಪಥ ಕಾಮಗಾರಿ ಆಗಸ್ಟಿನಲ್ಲಿ ಪೂರ್ಣ

ನವದೆಹಲಿ : ಕರ್ನಾಟಕದಲ್ಲಿ ಕೇಂದ್ರ ಸರ್ಕಾರ 7,060 ಕೋಟಿ ರೂ ವೆಚ್ಚದಲ್ಲಿ ಆರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಯೋಜನೆ ಕೈಗೆತ್ತಿಕೊಂಡಿದ್ದು, ಆ ಪೈಕಿ ಗೋವಾ-ಕರ್ನಾಟಕ ಗಡಿ ಪ್ರದೇಶದಿಂದ ಕುಂದಾಪುರದವರೆಗಿನ ಎನ್ ಎಚ್-66ರಲ್ಲಿ ಚತುಷ್ಪಥ ಕಾಮಗಾರಿ ಶೇ 70ರಷ್ಟು ಪೂರ್ಣಗೊಂಡಿದ್ದು, ಮುಂದಿನ ಆಗಸ್ಟಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ಮನಸುಖ್ ಮಾಂಡವೀಯ ನಿನ್ನೆ ರಾಜ್ಯಸಭೆಗೆ ಮಾಹಿತಿ ನೀಡಿದರು.