ಕಿನ್ನಿಗೋಳಿಯಲ್ಲಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಮುಲ್ಕಿ : ಇಲ್ಲಿಗೆ ಸಮೀಪದ ಕಿನ್ನಿಗೋಳಿ ನೇಕಾರ ಕಾಲೋನಿ ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ನಿವಾಸಿ ಗುರುಪ್ರಸಾದ ಪೂಜಾರಿ (36) ಕೂಲಿ ಕೆಲಸ ಮಾಡಿಕೊಂಡು ತಾಯಿಯೊಂದಿಗೆ ವಾಸವಾಗಿದ್ದ. ಮಂಗಳವಾರ ರಾತ್ರಿ ಹೊತ್ತು ಏಕಾಎಕಿ  ರಾತ್ರಿ ತಮ್ಮ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು ಎಂದು ತಿಳಿದು ಬಂದಿದೆ.