ಕೂಲಿ ಕಾರ್ಮಿಕ ಮಲಗಿದ್ದಲ್ಲೇ ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದ ಬಂದರ್ ದಕ್ಕೆ ಸಮೀಪ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲೇ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ಕೊಣಾಜೆ ಸಮೀಪದ ಪಾವೂರು ನಿವಾಸಿ ಮುಹಮ್ಮದ್ ರಫೀಕ್ ಯಾನೆ ರಫೀಕ್ (52) ಮೃತರು. ಮೂರ್ಛೆರೋಗ ಹಾಗೂ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಎರಡು ತಿಂಗಳ ಹಿಂದೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಮೃತದೇಹವನ್ನು ಮಹಜರು ನಡೆಸಿ ಮನೆ ಮಂದಿಗೆ ಹಸ್ತಾಂತರ ಮಾಡಲಾಗಿದೆ. ಪಾಂಡೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.