ಮೊಸರುಕುಡಿಕೆ ಮೆರವಣಿಗೆ : ಮದ್ಯ ಮಾರಾಟ ನಿಷೇಧ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಮೊಸರು ಕುಡಿಕೆ ಮೆರವಣಿಗೆ ಸಂದರ್ಭ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಇದರಂತೆ ದ ಕ ಜಿಲ್ಲೆಯಲ್ಲಿ ಸೆಪ್ಟಂಬರ್ 14ರಂದು ಬೆಳಿಗ್ಗೆ 6 ಗಂಟೆಯಿಂದ ಸೆಪ್ಟಂಬರ್ 15ರ ಬೆಳಿಗ್ಗೆ 6 ಗಂಟೆವರೆಗೆ ಮೊಸರು ಕುಡಿಕೆ ನಡೆಯುವ ಸುರತ್ಕಲ್, ಕಾವೂರು, ಮೂಡಬಿದ್ರೆ, ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ ಹಾಗೂ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮದ್ಯ ಮಾರಾಟ ಕೇಂದ್ರಗಳನ್ನು ಮುಚ್ಚಲು ಡೀಸಿ ಆದೇಶಿಸಿದ್ದಾರೆ.