ಅಕ್ರಮ ಮರಳುಗಾರಿಕೆ, ಸಾಗಾಟ ನಿಲ್ಲಿಸಲು ಡೀಸಿಗೆ ಲೋಕಾ ಸೂಚನೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಸಾಗಾಟಕ್ಕೆ ತಡೆ ಹಾಕುವಂತೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಅವರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಅವರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಭಾರೀ ದಂಡ ವಿಧಿಸುವಂತೆ ಸೂಚಿಸಿದರು.

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟದ ವಿರುದ್ಧ ಕ್ರಮ ಕೈಗೊಂಡು ಅದರ ವರದಿಯನ್ನು ಫೆಬ್ರವರಿ ಮೂರನೇ ವಾರದಲ್ಲಿ ಸಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಸುಮಿತ್ರಾ ಅವರಿಗೆ ನಿರ್ದೇಶನ ನೀಡಿದರು.