ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಕಂಬಕ್ಕೆ ಗುದ್ದಿ ಪಲ್ಟಿಯಾದ ಲಾರಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕೆಂಪು ಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ವಿದ್ಯುತ್ ಕಂಬಕ್ಕೆ ಬಡಿದು ರಸ್ತೆಗೆ ಉರುಳಿ ಬಿದ್ದ ಘಟನೆ ಕೊಣಾಜೆ ಗ್ರಾಮ ಚಾವಡಿ ಸಮೀಪದ ಸಣ್ಣಪದವು ಬಳಿ ನಡೆದಿದೆ.

ಇಲ್ಲಿನ ಅಪಾಯಕಾರಿ ತಿರುವಿನಲ್ಲಿ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ವೇಳೆ ವಿದ್ಯುತ್ ನಿಲುಗಡೆಯಾಗಿತ್ತು. ಇದರಿಂದ ಭಾರೀ ಅನಾಹುತವೊಂದು ತಪ್ಪಿ ಹೋಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿದ್ಯುತ್ ಕಂಬ ಧರಾಶಾಹಿಯಾಗಿದ್ದು, ಸಣ್ಣಪದವು ಮೂಲಕ ಸಾಗುವ ವಾಹನಗಳು ಸುಮಾರು ಅರ್ಧಗಂಟೆಗಳ ಕಾಲ ಸರದಿ ಸಾಲಲ್ಲೇ ನಿಂತಿದ್ದವು. ಚಾಲಕನು ಸಣ್ಣಪುಟ್ಟ ಗಾಯಗಳೊಂದಿಗೆ