ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಪ್ರಯಾಣಿಕರು ಅದೃಷ್ಟವಶಾತ್ ಪಾರು

ನಮ್ಮ ಪ್ರತಿನಿಧಿ ವರದಿ

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಧರೆಗೆ ಏರಿ ಜಖಂಗೊಂಡಿದ್ದರೂ ಪ್ರಯಾಣಿಕರೆಲ್ಲ ಅದೃಷ್ಟವಶಾತ್ ಪಾರಾದ ಘಟನೆ ಮಾಣಿ ಸಮೀಪ ನಡೆದಿದೆ.

ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದ್ದ ಕಾರು ಬಳಿಕ ರಸ್ತೆ ಬದಿಯ ಧರೆಗೆ ಏರಿ ನಿಂತಿದೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ತುಂಡಾಗಿ ಕಾರು ಜಖಂಗೊಂಡಿದ್ದರೂ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ.