ಗಾಂಜಾ ಸಹಿತ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ

 

ನಮ್ಮ ಪ್ರತಿನಿಧಿ ವರದಿ

ಬೆಳ್ತಂಗಡಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಆತನಲ್ಲಿದ್ದ ಅಮಲು ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ.

ಗುರುವಾರ ಓಡಿಲ್ನಾಳ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದವನನ್ನು ಬೆಳ್ತಂಗಡಿ ಪೊಲೀಸರು ವಿಚಾರಿಸಿದಾಗ ಗಾಂಜಾ ಇರುವುದನ್ನು ಪತ್ತೆಹಚ್ಚಿದ್ದಾರೆ. ಬಂಧಿತನನ್ನು ಗೇರುಕಟ್ಟೆ ಕಜೆ ಎಂಬಲ್ಲಿನ ನಿವಾಸಿ ಉಮ್ಮರ್ ಫಾರೂಕ್ (28) ಎಂದು ಗುರುತಿಸಲಾಗಿದೆ. ಈತನಿಂದ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ವಿರುದ್ಧ ಈ ಹಿಂದೆಯೂ ಹಲವಾರು ಪ್ರಕರಣಗಳು ದಾಖಲಾಗಿವೆ.