ಶಂಕಾಸ್ಪದ ವ್ಯಕ್ತಿ ಸೆರೆ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ವಿಟ್ಲ : ಬೆಳಗ್ಗಿನ ಜಾವ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಒಕ್ಕೆತ್ತೂರು ಸಮೀಪದ ಕೊಡಂಗೆ ನಿವಾಸಿ ಮಹಮ್ಮದ್ ಇಕ್ಬಾಲ್ (31) ಬಂಧಿತ ಆರೋಪಿ. ಬುಧವಾರ ಮುಂಜಾನೆ ಪೊಲೀಸರು ಗಸ್ತು ತಿರುಗುತ್ತಿದ್ದಾಗ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ಇಕ್ಬಾಲನನ್ನು ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಟ್ವಾಳ ತಹಶೀಲ್ದಾರರ ಮುಂದೆ ಹಾಜರುಪಡಿಸಿದ್ದಾರೆ.