ವಿಷಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾಂದರ್ಭಿಕ ಚಿತ್ರ

ಕರಾವಳಿ ಅಲೆ ವರದಿ

ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತಾಲೂಕಿನ ನಿಟ್ಟೆ ಗ್ರಾಮ ಲೆಮಿನಾ ಕ್ರಾಸ್ ಬಳಿಯ ನಿವಾಸಿ ವಿಟ್ಟು ಮೂಲ್ಯ (84) ಎಂಬವರು ಕಳೆದ ಫೆಬ್ರವರಿ 11 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರು 14ರಂದು ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY