ವಿದ್ಯುತ್ ತಗುಲಿ ಸಾವು

ನಮ್ಮ ಪ್ರತಿನಿಧಿ ವರದಿ

ವಿಟ್ಲ : ತುಂಡಾಗಿ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ತೋಟದಲ್ಲಿದ್ದ ವ್ಯಕ್ತಿಯೊಬ್ಬರು ಪೆರುವಾಯಿ ಗ್ರಾಮದಲ್ಲಿ ಮೃತಪಟ್ಟಿದ್ದಾರೆ.

ಇಲ್ಲಿನ ಕಾನಮನೆ ನಿವಾಸಿ ಸಿದ್ದಿಕುಂಞ್ಞ(45)ಯವರು ತನ್ನ ತೋಟದಲ್ಲಿದ್ದ ಸಂದರ್ಭ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.