ವಿಷ ಸೇವಿಸಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಹೊಗೆಬೆಟ್ಟು ಎಂಬಲ್ಲಿ ನಡೆದಿದೆ.

ಎಳ್ಳಾರೆ ಗ್ರಾಮದ ಲೋಕಯ್ಯ ಪೂಜಾರಿ ಎಂಬವರ ಪುತ್ರ ಶಶಿಕಾಂತ್ ಪೂಜಾರಿ (35) ಮಂಗಳವಾರ ಮನೆಯ ಸಮೀಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.