ಜಿಗುಪ್ಸೆ : ವ್ಯಕ್ತಿ ಆತ್ಮಹತ್ಯೆ

ಕರಾವಳಿ ಅಲೆ ವರದಿ
ಕಾರವಾರ : ಇಲ್ಲಿನ ಅರ್ಜುನ್ ಚಿತ್ರಮಂದಿರದ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಲತಃ ಬಿಣಗಾದ ಮೂಡಲಮಕ್ಕಿಯ ಮಂಜುನಾಥ ಬಾಳಾ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಾಡಿಗೆ ಮನೆಯಲ್ಲಿ ವಾಸವಿದ್ದ ಈತ ಕಳೆದ ಕೆಲವು ದಿನಗಳ ಹಿಂದೆ ಕಾಲಿಗೆ ಗಾಯ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಆದರೂ ಗಾಯ ವಾಸಿಯಾಗದೇ, ಗ್ಯಾಂಗ್ರಿನ್ ಆಗಿ ಪರಿರ್ವನೆಯಾಗಿತ್ತು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY