ತೆಂಗಿನ ಮರದಿಂದ ಬಿದ್ದು ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಬೆಳ್ತಂಗಡಿ : ತೆಂಗಿನಕಾಯಿ ಕೀಳುವಾಗ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಮಂಜೊಟ್ಟಿ ಕೊಲ್ಯೊಟ್ಟು ನಿವಾಸಿ ಲಸ್ರಾದೋ ಡಿಸೋಜ (58) ಎಂಬವರು ಮಧ್ಯಾಹ್ನ ತನ್ನ ತೋಟದಲ್ಲಿ ತೆಂಗಿನ ಮರದಿಂದ ಕಾಯಿ ಕೀಳುತ್ತಿದಾಗ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY