ತೆಂಗಿನ ಮರದಿಂದ ಬಿದ್ದು ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ವಿಟ್ಲ : ವೀರಕಂಬ ಗ್ರಾಮದಲ್ಲಿ ತೆಂಗಿನ ಮರದಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಮಿಕರೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

ಇಲ್ಲಿನ ಅಂಕತ್ತಡ್ಕ ನಿವಾಸಿ ಕೂಲಿ ಕಾರ್ಮಿಕ ವೃತ್ತಿಯ ವಾಸು ಪೂಜಾರಿ (65) ಮೃತಪಟ್ಟ ದುರ್ದೈವಿ. ತೆಂಗಿನಕಾಯಿ ಕೀಳಲು ಮರವೇರಿದ್ದ ಪೂಜಾರಿಯವರು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.