ಹೊಳೆಯಲ್ಲಿ ಶವ ಪತ್ತೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಭಟ್ಕಳ : ಮುಠ್ಠಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಹಳ್ಳಿ ಹೊಳೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.

ಮೃತನನ್ನು ಮಂಜುನಾಥ ತುಕಾರಾಮ ದುಪತ್ತು (54) ಎಂದು ಗುರುತಿಸಲಾಗಿದೆ. ಈತ ತಾಲೂಕಿನ ಸರ್ಪನಕಟ್ಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಬೇಹಳ್ಳಿಯ ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ. ಬುಧವಾರ ಬೆಳಿಗ್ಗೆ ಬೇಹಳ್ಳಿ ಹೊಳೆಯಲ್ಲಿ ಶವವೊಂದು ತೇಲುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಹೊಳೆಯಿಂದ ಮೇಲಕ್ಕೆತ್ತಿ ಸರಕಾರಿ ಆಸ್ಪತ್ರೆಗೆ ಸಾಗಿಸಲು ಗ್ರಾಮ ಸಹಾಯಕ ಮಂಜುನಾಥ ನಾಯ್ಕ ಹಾಗೂ ಇತರರು ನೆರವಾದರು. ಗ್ರಾಮೀಣ ಠಾಣೆಯಲ್ಲಿ ಮೃತನ ಪತ್ನಿ ಸಾವಿತ್ರಿ ಮಂಜುನಾಥ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.