ಮಲೇರಿಯಾದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಮಲೇರಿಯಾ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಹಮಣಿಬೆಟ್ಟು ಎಂಬಲ್ಲಿ ನಡೆದಿದೆ.

ನಲ್ಲೂರು ಗ್ರಾಮದ ಮೋಹನ್ ಕುಲಾಲ್ (54) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದವರು. ಈತ ಹಲವು ವರ್ಷಗಳಿಂದ ಮುಂಬೈನಲ್ಲಿದ್ದು, ಮಂಗಳವಾರ ಮುಂಜಾನೆ ಮುಂಬೈನಿಂದ ಊರಿಗೆ ಬಂದು ಈ ಕೃತ್ಯ ಎಸಗಿದ್ದಾರೆ.ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.