ವಿವಾಹಿತೆ, ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

 

ನಮ್ಮ ಪ್ರತಿನಿಧಿ ವರದಿ

ಉಡುಪಿ : ವಿವಾಹಿತೆ ಮತ್ತು ಯುವಕ ಶುಕ್ರವಾರ ರಾತ್ರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಬಾಗೇಪಲ್ಲಿ ಟೌನ್ 6ನೇ ವಾರ್ಡಿನ ಕೃಷ್ಣಪ್ಪ ಎಂಬವರ ಬಾಡಿಗೆ ಮನೆ ನಿವಾಸಿ ಅಶ್ವಥ ನಾಯ್ಕ ಪತ್ನಿ ಗೀತಾ (25) ಮತ್ತು ಚಿಕ್ಕಮಗಳೂರು ಜಿಲ್ಲೆ ಕೈಮರ ಗ್ರಾಮ ಶಾಲೆಬೀದಿ ನಿವಾಸಿ ದಿವಂಗತ ಸುಬ್ಬನಾಯ್ಕ ಮಗ ಸುರೇಶ (27) ಆತ್ಮಹತ್ಯೆ ಮಾಡಿಕೊಂಡವರು.

ಇಬ್ಬರ ಮೃತದೇಹ ಇಂದ್ರಾಳಿ ರೈಲ್ವೇ ಸೇತುವೆ ಬಳಿಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ ಎಂದು ಇಂದ್ರಾಳಿ ನಿಲ್ದಾಣದ ಸ್ಟೇಶನ್ ಮಾಸ್ಟರ್ ವಿನೋದ್ ಕುಮಾರ್ ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY