ಬಾಲಕಿಗೆ ಲೈಂಗಿಕ ಕಿರುಕುಳ

ಸಾಂದರ್ಭಿಕ ಚಿತ್ರ

ಕಾಸರಗೋಡು : ಹದಿನಾರರ ಹರೆಯದ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾಗಿಸಿದ ಬಗ್ಗೆ ಕುಂಬಳೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕರ್ನಾಟಕದ ದಾವಣಗೆರೆ ನಿವಾಸಿಯಾದ ಯುವಕನನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಕುಂಬಳೆ ಠಾಣಾ ವ್ಯಾಪ್ತಿ ನಿವಾಸಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡ ಯುವಕ ಆಕೆಯಲ್ಲಿ ಪ್ರೀತಿಯ ನಾಟಕವಾಡಿ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾಗಿಸಿದ್ದಾನೆ ಎನ್ನಲಾಗಿದೆ.