ಬ್ಯಾನರ್ ಹರಿದ ಕಿಡಿಗೇಡಿಗಳು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕ, ಆಹಾರ ಖಾತೆ ಸಚಿವರೂ ಆಗಿರುವ ಯು ಟಿ ಖಾದರ್ ಅವರ ಪರವಾಗಿ ಹಾಕಲಾಗಿದ್ದ ಅಭಿವೃದ್ಧಿ ಕಾಮಗಾರಿಗಳ ಬ್ಯಾನರನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.

ಇಲ್ಲಿ ವಿವಿಧ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡುವ  ಅಭಿನಂದನಾ ಬ್ಯಾನರ್‍ಹರಿದು ಹಾಕಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.