ತಿಂಗಳಾಂತ್ಯದೊಳಗೆ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ : ಸೀಎಂ

ಬೆಂಗಳೂರು : ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು ರೂ 200ಕ್ಕೆ ಸೀಮಿತಗೊಳಿಸುವ ರಾಜ್ಯ ಬಜೆಟ್ ಪ್ರಸ್ತಾಪವನ್ನು ಈ ತಿಂಗಳ ಅಂತ್ಯದೊಳಗೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ  ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆಗಿರುವ ವಿಳಂಬವನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ,  ಸರಕಾರವು ಸೂಕ್ತ ಆದೇಶವನ್ನು ಮುಂದಿನ ಕೆಲ ದಿನಗಳಲ್ಲಿ ಹೊರಡಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಕೆಲ ಮಲ್ಟಿಪ್ಲೆಕ್ಸ್ ಮಾಲಕರು ಟಿಕೆಟ್ ದರದ ಮೇಲೆ ವಿಧಿಸಲಾಗುವ ನಿಯಂತ್ರಣಕ್ಕೆ ತಮ್ಮ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಸರಕಾರ ಅವರ ಒತ್ತಡಕ್ಕೆ ಮಣಿಯುವ ಸಾಧ್ಯತೆಯ ಬಗ್ಗೆ ಹಲವರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಎಲ್ಲಾ ಗೊಂದಲಗಳಿಗೆ ಪರಿಹಾರವೆಂಬಂತೆ ಸ್ವತಹ ಮುಖ್ಯಮಂತ್ರಿಯೇ ಈಗ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ರಸಿಕರು ನಿಟ್ಟುಸಿರು ಬಿಡುವಂತಾಗಿದೆ.