ಅಹಿತಕರ ಘಟನೆಗಳ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ಸೆಂಟ್ರಲ್ ಕಮಿಟಿ ಎಸ್ಪಿ, ಪೊಲೀಸ್ ಕಮಿಷನರಗೆ ಮನವಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗವು ಅಧ್ಯಕ್ಷ ಕೆ ಎಸ್ ಮೊಹಮ್ಮದ್ ಮಸೂದ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ಪ್ರಸಕ್ತ ಜಿಲ್ಲೆಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿತು.

ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸಬೇಕು, ಈ ಘಟನೆಗಳ ಹಿಂದಿರುವ ಶಕ್ತಿಗಳನ್ನು ಗುರುತಿಸಿ ಕಾನೂನಿನ ಕಠಿಣ ಕ್ರಮಕ್ಕೆ ಒಳಪಡಿಸಬೇಕೆಂದು ಹಾಗೂ ಅಮಾಯಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿಕೊಂಡು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಮೊಹಮ್ಮದ್ ಮಸೂದ್ ಮನವಿ ಮಾಡಿದರು.

“ಈಗಾಗಲೇ ದಾಖಲಾದ ಪ್ರಕರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಅದು ಪ್ರಗತಿಯಲ್ಲಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಕಮಿಷನರ್ ಭರವಸೆ ನೀಡಿದರು.

 

 

LEAVE A REPLY