ಎಸ್ಸಿಡಿಸಿಸಿ ಬ್ಯಾಂಕಿಗೆ 18ನೇ ಬಾರಿ ನಬಾರ್ಡ್ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು : ಸ್ವಸಹಾಯ ಗುಂಪುಗಳ ನಿರ್ವಹಣೆಯಲ್ಲಿ ರಾಜ್ಯದಲ್ಲೇ ಗಮನಾರ್ಹ ಸಾಧನೆಗೈದಿರುವ ಎಂ ಎನ್ ರಾಜೇಂದ್ರಕುಮಾರ್ ನಾಯಕತ್ವದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನಬಾರ್ಡ್ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ನಬಾರ್ಡ್ ಪ್ರಾದೇಶಿಕ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಷಚಂದ್ರ ಕುಂಟಿಯಾರಿಂದ ನಬಾರ್ಡ್ ಪ್ರಶಸ್ತಿಯನ್ನು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷ ಎಂ ಎನ್ ರಾಜೇಂದ್ರಕುಮಾರ್ ಸ್ವೀಕರಿಸಿದರು.

2015-16 ಮತ್ತು 2016-17ನೇ ಸಾಲಿನಲ್ಲಿ ಸ್ವ ಸಹಾಯ ಗುಂಪುಗಳಿಗೆ ಅತೀ ಹೆಚ್ಚು ಸಾಲ ಸಂಯೋಜನೆ, ಸಾಲ ವಸೂಲಾತಿ ಹಾಗೂ ಸ್ವಸಹಾಯ ಗುಂಪುಗಳ ಒಟ್ಟು ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆಗೈದಿರುವ ಎಸ್ ಸಿ ಡಿ ಸಿ ಸಿ ಬ್ಯಾಂಕಿಗೆ ನಬಾರ್ಡ್ ಪ್ರಶಸ್ತಿಯನ್ನು ನೀಡಲಾಗಿದೆ. ಎಸ್ ಸಿ ಡಿ ಸಿ ಸಿ ಬ್ಯಾಂಕ್ 1999-2000 ಜಾರಿಗೆ ತಂದಂದಿನಿಂದ ಇದುವರೆಗೆ ಒಟ್ಟು 18 ಬಾರಿ ನಬಾರ್ಡ್ ರಾಜ್ಯ ಪ್ರಶಸ್ತಿಯಿಂದ ಪುರಸ್ಕøತಗೊಂಡಿದೆ.