ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಕಾಂಗ್ರೆಸ್ ಕಾರಣ : ನಳಿನ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದಾದ್ಯಂತ ಪಾಸ್ ಆಗುವ ಹೆದ್ದಾರಿಗಳಲ್ಲಿ ಕಾಮಗಾರಿ ವಿಳಂಬ ಆಗಿರುವುದಕ್ಕೆ ಸಂಸದ ನಳಿನ್‍ಕುಮಾರ್ ಕಟೀಲು ಕಾಂಗ್ರೆಸ್ ಪಕ್ಷವನ್ನು ದೂರಿದ್ದಾರೆ.

ಹೆದ್ದಾರಿ ಕಾಮಗಾರಿ ವಿಳಂಬವಾಗಿರುವುದಕ್ಕೆ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು  ಪಂಪ್ವೆಲ್ ಬಳಿ ಪ್ರತಿಭಟನೆ ನಡೆಸಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲಿನ  ಮೇಲ್ಸೇತುವೆ, ಸರ್ವೀಸ್ ರಸ್ತೆ ಸೇರಿದಂತೆ ಎಲ್ಲಾ ಕಾಮಗಾರಿಗಳು ವಿಳಂಬವಾಗಿವೆ ಎಂದು ಪ್ರತಿಭಟನಾಕಾರರು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಳಿನ್, ಕಾಮಗಾರಿ ನಡೆಸಲು ಭೂಸ್ವಾಧೀನ ಸೇರಿದಂತೆ ಪೂರಕ ವ್ಯವಸ್ಥೆಯನ್ನು ಮಾಡಿಕೊಡುವ ಹೊಣೆ ಮಂಗಳೂರು ಮಹಾನಗರ ಪಾಲಿಕೆಯದ್ದಾಗಿದೆ. ಬಳಿಕವಷ್ಟೇ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಈ ಕೆಲಸಗಳನ್ನು ತ್ವರಿತಗತಿಯಿಂದ ಮಾಡಲು ಸಾಧ್ಯ ಎಂದಿದ್ದಾರೆ.

ಜೂನ್ ತಿಂಗಳಿನಲ್ಲಿ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದ ಸಂಸದರು, ನಂತೂರು ಸರ್ಕಲಿನಲ್ಲಿ ಕೆಳಸೇತುವೆ ಕಾಮಗಾರಿಗೂ ಅನುಮೋದನೆ ಸಿಕ್ಕಿದೆ ಎಂದು ಹೇಳಿದ್ದಾರೆ.