ಬಂಧನ ಭೀತಿಯಿಲ್ಲ: ಎಚ್ಡೀಕೆ

ಕುಮಾರಸ್ವಾಮಿ

ಬೆಂಗಳೂರು : ಜಂತಕಲ್ ಮೈನಿಂಗ್ ಕುರಿತಂತೆ ಎಸ್‍ಐಟಿ ಅಧಿಕಾರಿಗಳ ಮುಂದೆ ಹಾಜರಾದ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತನಗೆ ಬಂಧನದ ಭೀತಿಯಿಲ್ಲ ಎಂದು ಹೇಳಿದ್ದಾರೆ.

ಎಸ್ ಐ ಟಿ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳು ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದಾದಲ್ಲಿ ಮೂರು ದಿನಗಳ ಮುಂಚೆ ನೋಟಿಸ್ ನೀಡುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.