ಉಪ ಚುನಾವಣೆಗೆ ಇಷ್ಟೊಂದು ಮಹತ್ವ ನೀಡುವ ಅಗತ್ಯ ಇಲ್ಲ

ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣಾ ಪ್ರಚಾರ ತಾರಕಕ್ಕೆ ಏರಿದೆ. ಕಾಂಗ್ರೆಸ್ ವಶದಲ್ಲಿದ್ದ ಈ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ತನ್ನ ಅತಿರಥ ಮಹಾರಥರನ್ನೆಲ್ಲ ಚುನಾವಣಾ ಪ್ರಚಾರಕ್ಕೆ ಕರೆಸಿಕೊಂಡಿದೆ. ಇನ್ನು ತಾನೇನೂ ಕಡಿಮೆ ಇಲ್ಲ ಎನ್ನುವ ರೀತಿಯಲ್ಲಿ ಕಾಂಗ್ರೆಸ್ ಕೂಡಾ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದೆ. ಬಿಜೆಪಿ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ನಡುವೆ ಜಿದ್ದಾಜಿದ್ದಿ ಹೋರಾಟ ನಡೆಯುತ್ತಿದೆ. ರಾಜ್ಯ ಸಚಿವ ಸಂಪುಟದ ಬಹುತೇಕ ಸಚಿವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ  ಯಾವುದೇ ಉಪಚುನಾವಣೆ ಫಲಿತಾಂಶ ಸೀಮಿತ ಪರಿಣಾಮ ಮಾತ್ರ ಬೀರಲು ಸಾಧ್ಯ ಒಟ್ಟಿನಲ್ಲಿ ಉಪ ಚುನಾವಣೆಗೆ ಈ ಎರಡೂ ಪಕ್ಷಗಳು ಇಷ್ಟೊಂದು ಮಹತ್ವ ನೀಡುವ ಅಗತ್ಯವಿತ್ತೇ

  • ಸುಧಾಕರ ಕೆ ದೇವಾಡಿಗ  ಬ್ರಹ್ಮಾವರ