ವಿಷಾನಿಲ ಸೇವಿಸಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಲಕ್ನೋ : ಶಾಮ್ಲಿ ಜಿಲ್ಲೆಯ ಸರಸ್ವತಿ ಮಂದಿರಕ್ಕೆ ಹತ್ತಿರದ ಸಕ್ಕರೆ ಕಾರ್ಖಾನೆಯಿಂದ ಸೋರಿಕೆಯಾದ ವಿಷಾನಿಲ ಸೇವಿಸಿ ಅಸ್ವಸ್ಥಗೊಂಡ 300ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಈಗಲೂ ಚಿಕಿತ್ಸೆ ಮುಂದುವರಿದಿದೆ. ಸಕ್ಕರೆ ಕಾರ್ಖಾನೆಯಲ್ಲಿ ನಿಯಮಿತ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದಾಗ ವಿಷಾನಿಲ ಸೋರಿಕೆಯಾಗಿದೆ ಎಂದು ಶಾಮ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದರು.