ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ಪಾಲೆಮಾರ್ ಆಗ್ರಹ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಮರಳು ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿರುವ ಮಾಜಿ ಸಚಿವ ಕೃಷ್ಣ ಪಾಲೆಮಾರ್, ಈ ಬೇಡಿಕೆ ಈಡೇರದೇ ಹೋದಲ್ಲಿ ತಾನು ರಸ್ತೆಗಿಳಿದು ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಅಕ್ರಮ ಮರಳುಗಾರಿಕೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರಲ್ಲದೆ ದೂರು ನೀಡಿದವರಿಗೇ ಜೀವ ಬೆದರಿಕೆಗಳು ಬರುತ್ತವೆ ಎಂದ ಆರೋಪಿಸಿದರು.

ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದೂ  ದೂರಿದ ಪಾಲೆಮಾರ್, “ಯಾವುದಾದರೂ ಯೋಜನೆಯ ಕೆಲಸ ನಡೆದಿದ್ದೇ ಆದರೂ ಅದು ಬಿಜೆಪಿ ಆಡಳಿತ ಸಮಯದಲ್ಲಿ ಅನುಮೋದಿತ ಯೋಜನೆಗಳು” ಎಂದು ಹೇಳಿಕೊಂಡರು. ಮರಳು ಸಮಸ್ಯೆಯಿಂದ ಅಭಿವೃದ್ಧಿ ಕಾರ್ಯಗಳೂ ಕುಂಠಿತಗೊಂಡಿವೆ ಎಂದು ಅವರು ಆರೋಪಿಸಿದರು.