ಪಾಶ್ರ್ವವಾಯುಪೀಡಿತ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ತಾಲೂಕಿನ ಇರ್ವತ್ತೂರು ಗ್ರಾಮದ ¨ಗಲ್ತಕಟ್ಟೆಯಲ್ಲಿ ಬೋಜ ಪುಜಾರಿ (60) ಶುಕ್ರವಾರ ಪಾಶ್ರ್ವವಾಯುಪೀಡಿತ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತಾನು ನಡೆಸುತ್ತಿದ್ದ ಅಂಗಡಿಯ ಮುಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುಣವಾಗದ ಖಾಯಿಲೆಯಿಂದ ಮನನೊಂದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.