ಶಿಕ್ಷಕರನ್ನು ಬೇರೆಡೆ ನಿಯೋಜನೆ ಮಾಡದಂತೆ ಪೋಷಕರ ಮನವಿ

ನಮ್ಮ ಪ್ರತಿನಿಧಿ ವರದಿ

ಪುತ್ತೂರು : ಬಜತ್ತೂರು ಶಾಲೆಯ ಶಿಕ್ಷಕರನ್ನು ಬೇರೆಡೆ ನಿಯೋಜನೆ ಮಾಡದಂತೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ನೀಡಿದರು. ಶಾಲೆಯಲ್ಲಿ 140 ಮಂದಿ ವಿದ್ಯಾರ್ಥಿಗಳಿದ್ದು, ಈ ಬಾರಿ 30ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಒಂದನೇ ತರಗತಿಗೆ ದಾಖಲಾಗಿದ್ದಾರೆ. ಶಿಕ್ಷಕರನ್ನು ಬೇರೆಡೆ ನಿಯೋಜನೆ ಮಾಡಿದರೆ ಮಕ್ಕಳಿಗೆ ತೊಂದರೆಯಾಗಲಿದ್ದು, ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.