ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬರಬೇಕು

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪಡಿತರ ಮತ್ತು ನಾಗರಿಕ ಸರಬರಾಜು ಸಚಿವ ಯು ಟಿ ಖಾದರ್ ಮೊದಲಾದವರು ಇದ್ದರು

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದೇಶದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದರು.

ನಗರದಲ್ಲಿ ಖಾಸಗಿ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗೋವಾದಲ್ಲಿ ಈಗಾಗಲೇ ಖಾಸಗಿ ಆಸ್ಪತ್ರೆಗಳು ನಗದು ಪಾವತಿ ಬದಲು ಕ್ಯಾಶ್ ಲೆಸ್ ವ್ಯವಸ್ಥೆಗೆ ರೂಪಾಂತರಗೊಂಡಿದೆ. ಇದು ದೇಶದ ಎಲ್ಲಾ ಆಸ್ಪತ್ರೆಗಳಲ್ಲೂ ಆಗಬೇಕೆಂದರು.

ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಇರಬೇಕು. ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗೆ ರೋಗಿಗಳು ಬಂದಾಗ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು. ಸಮಾಜದಲ್ಲಿ ಆರೋಗ್ಯ ಕ್ಷೇತ್ರ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದರು.

ಗೋವಾದಲ್ಲಿ 6ರಿಂದ 7 ಸಾವಿರ ಮಂದಿ ಬಡವರಿಗೆ ಉಚಿತವಾಗಿ ಮೆಡಿಕ್ಲೇಮ್ ಯೋಜನೆಯನ್ನು ಅಲ್ಲಿನ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಸರ್ಕಾರಿ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯ 30 ಕೋಟಿ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ತಿಳಿಸಿದರು.