ಶರತ್ ಮಡಿವಾಳ ಹತ್ಯೆ ಖಂಡಿಸಿ ಪರಿವಾರ ಸಂಘಟನೆಗಳ ಪ್ರತಿಭಟನೆ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಯಲ್ಲಾಪುರ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳವಾರ ಸಂಘಪರಿವಾರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನೆಡೆಸಿದರು.

ಪಟ್ಟಣದ ದೇವಿ ಮೈದಾನದಿಂದ ನೂರಾರು ಬಿಜೆಪಿ ಕಾರ್ಯಕರ್ತರು ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಬೆಲ್ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮೆರವಣಿಗೆಯ ಉದ್ದಕ್ಕೂ ಹತ್ಯೆಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಂಸದ ಅನಂತಕುಮಾರ ಹೆಗಡೆ ಮಾತನಾಡಿ, “ಪ್ರತಿ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲಾಗುತ್ತಿದೆ. ಕರ್ನಾಟಕದ ಹಿಂದೂಗಳು ತಾಳ್ಮೆಯ ಜನ. ಅವರ ಸಹನೆ ಪರೀಕ್ಷಿಸಿದರೆ ತಕ್ಕ ಪ್ರತೀಕಾರ ತೀರಿಸುವವರೆಗೆ ಸುಮ್ಮನಿರುವುದಿಲ್ಲ” ಎಂದರು.