ಏರ್ಪೋರ್ಟಿನಲ್ಲಿ ಗಾಂಜಾ ಸಹಿತ ಪ್ರಯಾಣಿಕ ಸೆರೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದಿಂದ ಕೊಲ್ಲಿ ರಾಷ್ಟ್ರ ಬೆಹ್ರೈನಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಿದ ಕಸ್ಟಮ್ಸ್ ಅಧಿಕಾರಿಗಳು ಮೂರು ಕಿಲೋ ಗಾಂಜಾದ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತೀಶ್ ಸುವರ್ಣ (20) ಬಂಧಿತ ಆರೋಪಿ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಬಡಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಿವಾಸಿ ಪ್ರತೀಶ್ ಸುವರ್ಣ ಏರ್ ಇಂಡಿಯಾ ಎಕ್ಸಪ್ರೆಸ್ ಮೂಲಕ ಬೆಹ್ರೈನಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಈತನ ಚಲನವಲನಗಳ ಮೇಲೆ ನಿಗಾ ಇಟ್ಟ ಅಧಿಕಾರಿಗಳು ತಪಾಸಣೆ ನಡೆಸಿದಾಗ ಮೂರು ಕಿಲೋ ಗಾಂಜಾ ಪತ್ತೆಯಾಗಿದೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.