ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಸ್ಕೂಟರನ್ನು ಓವರಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ರಸ್ತೆ ನಡುವಿನ ಡಿವೈಡರಿಗೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಕಾರ್ಕಳ ಬಂಗ್ಲೆಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಭಾರತಿ ಎಂಬ ಪ್ರಯಾಣಿಕರೊಬ್ಬರಿಗೆ ಗಾಯಗಳಾಗಿವೆ.