ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ತಾಲೂಕಿನ ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪಿಡಿಒ) ಎಸ್ ನಂಜುಂಡಯ್ಯ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

ಸ್ಥಳೀಯ ನಿವಾಸಿ ಪದ್ಮನಾಭ ಮಯ್ಯ ಎಂಬವರಿಂದ ಕುಡಿಯುವ ನೀರಿನ ಸಂಪರ್ಕ ಹಾಗೂ ಕೃಷಿಗೆ ವಿದ್ಯುತ್ ಸಂಪರ್ಕಕ್ಕಾಗಿ ಒಂದು ಸಾವಿರ ರೂಪಾಯಿ ಲಂಚ ಕೇಳಿ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇನಸ್ಪೆಕ್ಟರ್ ಯೊಗೀಶ್ ಕುಮಾರ್ ನೇತೃತ್ವದ ತಂಡ ಪಿಡಿಒರನ್ನು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ.

 

LEAVE A REPLY