ಟೆಂಪೋ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸಾವು

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಮಹಿಳೆಯೊಬ್ಬರು ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಶನಿವಾರ ಕಾರ್ಕಳದ ಮೂರುಮಾರ್ಗ ಜಂಕ್ಷನ್ ಬಳಿ ನಡೆದಿದೆ.

ತೆಳ್ಳಾರು ಗ್ರಾಮದ ಬಲದೊಟ್ಟು ನಿವಾಸಿ ಕಮಲಾ ಗೌಡ ಎಂಬವರು ಮೃತ ಮಹಿಳೆ. ಈಕೆ ಪೇಟೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್ ನಿಲ್ದಾಣದಿಂದ ಆನೆಕೆರೆಯತ್ತ ಚಲಿಸುತ್ತಿದ್ದ ಟೆಂಪೋ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯತನವೇ ಈ ಅಪಘಾತಕ್ಕೆ ಕಾರಣವಾಗಿದ್ದು, ಈತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.