ಹಳೆಯಂಗಡಿ: ಅಪಘಾತ, ಪಾದಚಾರಿ ಗಂಭೀರ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ದ್ವ್ವಿಚಕ್ರವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳೀಯ ನಿವಾಸಿ ದೇವದಾಸ ಶ್ರೀಯಾನ್ ಎಂಬವರು ತಮ್ಮ ನಾದಿನಿ ಸುಶ್ಮಿತ ಎಂಬವರೊಂದಿಗೆ ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸುಶ್ಮಿತ ತಲೆಗೆ, ಕಾಲಿಗೆ ತೀವ್ರ ಗಾಯಗೊಂಡು ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಸಂಬಂದ ದ್ವಿಚಕ್ರ ವಾಹನ ಸವಾರನ ಮೇಲೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.