ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ
ಮಂಜೇಶ್ವರ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಉಪ್ಪಳ ಭಗವತೀ ಗೇಟ್ ಬಳಿಯ ಕಿರಣ್ ನಿಲಯದ ಕುಮಾರ್ (60) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ 8ರಂದು ಬೆಳಿಗ್ಗೆ 9.30ರ ವೇಳೆ ಉಪ್ಪಳ ಗೇಟ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದಿದ್ದು ಈ ಸಂದರ್ಭದಲ್ಲಿ ಆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಕುಮಾರಗೆ ಬೈಕ್ ಢಿಕ್ಕಿ ಹೊಡೆದಿತ್ತು.