ಪಾದಚಾರಿಗೆ ಕಾರು ಡಿಕ್ಕಿ, ತಲೆಗೆ ಗಂಭೀರ ಗಾಯ

ನಮ್ಮ ಪ್ರತಿನಿಧಿ ವರದಿ

ಪಡುಬಿದ್ರಿ : ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ತಲೆ ಸಹಿತ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಡೆಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರು ಎರ್ಮಾಳು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಬಳಿಯ ನಿವಾಸಿ ನವೀನ್ ಆಚಾರ್ಯ (30). ಇವರು ಸಂಜೆ ಸಮಯದಲ್ಲಿ ಮನೆಯ ಕಡೆ ಬರುವುದಕ್ಕಾಗಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ನೇರವಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಕೂಡಾ ಜಖಂಗೊಂಡಿದೆ. ತಲೆಯಲ್ಲಿ ರಕ್ತ ಸ್ರವವಾಗುತ್ತಿದ್ದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗಾಯಾಳು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.