ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ, ಬಳಕೆ ನಿಷೇಧಿಸಲು ಮನವಿ

ಸಾಂದರ್ಭಿಕ ಚಿತ್ರ

ಕಾರವಾರ : ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮತ್ತು ಬಳಕೆ ನಿಷೇಧಿಸಿ, ಧ್ವಜದ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಅಪರ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಮಾಡಿದೆ.

ಸ್ವಾತಂತ್ರ್ಯ ದಿನಾಚರಣೆಯ ಬಳಿಕ ಪ್ಲಾಸ್ಟಿಕ್ ಧ್ವಜಗಳು ರಸ್ತೆ ಹಾಗೂ ಚರಂಡಿ ಪಾಲಾಗುತ್ತದೆ. ಇದರಿಂದ ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತಾಗುತ್ತದೆ. ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯು ಕಳೆದ 15 ವರ್ಷಗಳಿಂದ ಜನರಲ್ಲಿ ಪ್ಲಾಸ್ಟಿಕ್ ಧ್ವಜ ಬಳಸದಂತೆ ಜನಜಾಗೃತಿ ಮೂಡಿಸುತ್ತಿದೆ ಮತ್ತು ರಾಷ್ಟ್ರಧ್ವಜದ ಗೌರವ ಕಾಪಾಡಲು ಅಭಿಯಾನವನ್ನು ಪ್ರತಿವರ್ಷ ನಡೆಸಿಕೊಂಡು ಬಂದಿದೆ.