ವ್ಯಾಲೆಂಟೈನ್ ಡೇ : ಅಕೃತ್ಯ ತಡೆಯಲು ಪೊಲೀಸಿಗೆ ಮನವಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ವ್ಯಾಲೆಂಟೈನ್ ಡೇ ದಿನದಂದು ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡಿದ್ದಾರೆ.

“ಅನೇಕ ವರ್ಷಗಳಿಂದ ಭಾರತದಲ್ಲಿ ಫೆಬ್ರವರಿ 14ರ ವ್ಯಾಲೆಂಟೈನ್ ಡೇ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಛಾಚಾರಕ್ಕೆ ಕಾರಣವಾಗುತ್ತಿದೆ. ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ದುಃಖಕರ ಸಂಗತಿ. ಪಾರ್ಟಿಯ ಹೆಸರಿನಲ್ಲಿ ಯುವಕ-ಯುವತಿಯರು ಮದ್ಯಪಾನ, ಧೂಮಪಾನ ಮಾಡುವುದು, ಡ್ರಗ್ ಮಾಫಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ. ಅಷ್ಟೇ ಅಲ್ಲದೇ ಈ ದಿನ ಸಮಿಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕವಾಗುತ್ತಿರುವುದು ಅನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಫೆಬ್ರವರಿ 14ರಂದು ಇಂತಹ ಕೃತ್ಯಗಳಿಗೆ ಅವಕಾಶ ನೀಡದಂತೆ ಸಮಿತಿಯ ನಗರ ಪೊಲೀಸ್ ಕಮಿಷನರ್ ಅವರನ್ನು ಆಗ್ರಹಿಸಿದೆ.

 

 

 

 

LEAVE A REPLY