ಸಚಿವ ಮೇಟಿ ಸಂಪುಟದಿಂದ ಕಿತ್ತು ಹಾಕಲು ಪೂಜಾರಿ ಆಗ್ರಹ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ರಾಸಲೀಲೆ ಹಗರಣದಲ್ಲಿ ಸಿಕ್ಕಿ ಬಿದ್ದು, ಪಕ್ಷದ ಮರ್ಯಾದೆ ಕಳೆಯುತ್ತಿರುವ ಅಬಕಾರಿ ಸಚಿವ ಎಚ್ ವೈ ಮೇಟಿಯವರನ್ನು ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕೆಂದು ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಮೇಟಿಯವರು ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದು, ಪಕ್ಷ ಮತ್ತು ಸರಕಾರಕ್ಕೆ ದೊಡ್ಡ ಕಳಂಕವನ್ನು ತಂದಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ನೈತಿಕತೆ ಅನ್ನೋದು ಇದ್ದರೆ ಮೇಟಿಯನ್ನು ಕೂಡಲೇ ಸಂಪುಟದಿಂದ ಉಚ್ಚಾಟಿಸಲಿ” ಎಂದು ಹೇಳಿದರು. “ಸಿದ್ಧರಾಮಯ್ಯನವರಿಗೆ ಕ್ಯಾಬಿನೆಟ್ ಮಂತ್ರಿಗಳ ಮೇಲೆ, ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲ. ಅವರು ಸಂಪೂರ್ಣ ವಿಫಲರಾಗಿದ್ದಾರೆ. ಮೌಲ್ಯಗಳಿಗೆ ತಿಲಾಂಜಲಿ ಕೊಟ್ಟಿದ್ದಾರೆ” ಎಂದು ಟೀಕಿಸಿದರು.