ಕರಾವಳಿ ಜಿಲ್ಲೆಗಳ ಬೀಚ್ ಅಭಿವೃದ್ದಿಗೆ ಮುತುವರ್ಜಿ

ನಮ್ಮ ಪ್ರತಿನಿಧಿ ವರದಿ
ಉಡುಪಿ : ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ  ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡು ಕರಾವಳಿ ಕರ್ನಾಟಕದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆಸಲಾಯಿತು
ಉಡುಪಿ ಜಿಲ್ಲಾಧಿಕಾರಿ ಟಿ ವೆಂಕಟೇಶ್  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ಜಿ ಜಗಧೀಶ್ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಸಭೆಯಲ್ಲಿ ಭಾಗವಹಿಸಿದ್ದರು
ಮೂರು ಜಿಲ್ಲೆಗಳ ಆಯ್ದ ಬೀಚುಗಳ ಅಭಿವೃದ್ಧಿಯ ಬಗ್ಗೆ ಚರ್ಚೆಗಳನ್ನು ನಡೆಸಿದರು. ಈ ಬೀಚುಗಳಿಗೆ ಭೂ ಸೇನೆಯ ಸಹಾಯದಿಂದ ಮೂಲಭೂತ ಸವಲತ್ತುಗಳನ್ನು ಕಲ್ಪಿಸುವಂತೆ ನವೀನ್ ರಾಜ್ ಸಿಂಗ್ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು
ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಎನ್ ಮಂಜುಳ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಎಲ್ಲಾ ಅಧಿಕಾರಿಗಳು ಮಲ್ಪೆ ಬೀಚಿಗೆ ಭೇಟಿ ನೀಡಿ  ಬೀಚಿಗೆ ಬೇಕಾದ ಮೂಲಭೂತ ಸೌಲಭ್ಯಗಳ ಬಗ್ಗೆ ಅವಲೋಕಿಸಿದರು. ಇದೇ ವೇಳೆ ಮಲ್ಪೆ ಬೀಚಿನಲ್ಲಿರುವ ಬೀಚ್ ಕ್ಲೀನಿಂಗ್ ಯಂತ್ರದ ಕಾರ್ಯಾಚರಣೆಯನ್ನು ಕೂಡ ವೀಕ್ಷಿಸಿದರು