ಕಿಡ್ನಿ ವೈಫಲ್ಯ : ನಗರ ಜೈಲಿನ ಕೈದಿ ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಂಗಳೂರು ಜೈಲಿನ ವಿಚರಣಾಧೀನ ಕೈದಿ ಚಿಕಿತ್ಸೆ ಫಲಿಸದೇ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಬೊಕ್ಕಪಟ್ಣ ಅನ್ಸರ್(60) ಸಾವನ್ನಪ್ಪಿದ ಕೈದಿ.

ಕೊಕೇನ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ತಲೆ ಮರೆಸಿಕೊಂಡಿದ್ದ, ಪೊಲೀಸರು 8 ತಿಂಗಳ ಹಿಂದೆ ಬಂಧಿಸಿ ಸೆರೆಮನೆಯೊಳಕ್ಕೆ ತಳ್ಳಿದ್ದರು.

ಹಲವು ಸಮಯಗಳಿಂದ ಈತ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು ವೈದ್ಯಕೀಯ ತಪಾಸಣೆ ನಡೆಸಿ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದ. ಆದರೆ ಅನಾರೋಗ್ಯ ಉಲ್ಬಣಗೊಂಡ ಕಾರಣ ನವೆಂಬರ್ 2ರಂದು ಮತ್ತೆ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅನ್ಸರ್ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ.